ಲಿಂಗಕ್ಕೆ ಶರಣೆಂದು ಪೂಜಿಸಿ ಅರ್ಪಿಸಬಹುದಲ್ಲದೆ ಜಂಗಮವ ಪೂಜಿಸಿ ಸರ್ವಸುಖವನರ್ಪಿಸಿ ಶರಣೆನ್ನಬಾರದು ಎಲೆ ತಂದೆ. ಆಡಬಹುದು ಪಾಡಬಹುದಲ್ಲದೆ ನುಡಿದಂತೆ ನಡೆಯಲು ಬಾರದು ಎಲೆ ತಂದೆ. ಚೆನ್ನಮಲ್ಲಿಕಾರ್ಜುನದೇವಾ ನಿಮ್ಮ ಶರಣರು ನುಡಿದಂತೆ ನಡೆಯಲು ಬಲ್ಲರು ಎಲೆ ತಂದೆ.