ಲಿಂಗಗಂಭೀರದೊಳಗೆ ಜಗ ಹುಟ್ಟಿದಡೇನು ಆ ಲಿಂಗದಿಂದ ಘನವೆ ಶಿವಲಿಂಗದೊಳಗೆ ಜಗ ಜಗದೊಳಗೆ ಶಿವಲಿಂಗ ಲೋಕಾದಿ ಲೋಕಂಗಳಿಗೆ ನೀನು ಭಕ್ತಿಯ ಕಂದೆರೆದು ತೋರಿದೆ ಕೂಡಲಸಂಗಮದೇವರಲ್ಲಿ ಚೆನ್ನಬಸವಣ್ಣಾ ನಿನ್ನ ಶ್ರೀಪಾದಕ್ಕೆ ನಮೋ ನಮೋ ಎನುತ್ತಿರ್ದೆನು.