ಲಿಂಗಪ್ರೇಮಿಗಳನಂತರುಂಟು ಜಂಗಮಪೂಜಕರಾರನೂ ಜಗದೊಳಗೆ,


Title vachana saahitya
Author ಷಣ್ಮುಖಸ್ವಾಮಿ
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಲಿಂಗಪ್ರೇಮಿಗಳನಂತರುಂಟು ಜಗದೊಳಗೆ
ಜಂಗಮಪ್ರೇಮಿಗಳಾರನೂ ಕಾಣೆನಯ್ಯ. ಲಿಂಗಪೂಜಕರನಂತರುಂಟು ಜಗದೊಳಗೆ
ಜಂಗಮಪೂಜಕರಾರನೂ ಕಾಣೆನಯ್ಯ. ಲಿಂಗಪ್ರಾಣಿಗಳನಂತರುಂಟು ಜಗದೊಳಗೆ
ಜಂಗಮಪ್ರಾಣಿಗಳಾರನೂ ಕಾಣೆನಯ್ಯ. ಲಿಂಗದ ಬಾಯಿ ಜಂಗಮವೆಂದರಿದು ಮಾಡಿ ಮನವಳಿದು ಘನವಾದ ಸಂಗನಬಸವಣ್ಣನ ಶ್ರೀಪಾದಕ್ಕೆ ನಮೋ ನಮೋ ಎಂಬೆನಯ್ಯ ಅಖಂಡೇಶ್ವರಾ.