ಲಿಂಗವಶದಿಂದ ಬಂದ ನಡೆಗಳು ಲಿಂಗವಶದಿಂದ ಬಂದ ನುಡಿಗಳು ಲಿಂಗವಂತರು ತಾವು ಅಂಜಲದೇಕೆ ಲಿಂಗವಿರಿಸಿದಂತಿಪ್ಪುದಲ್ಲದೆ ಕೂಡಲಸಂಗಮದೇವ ಭಕ್ತರಭಿಮಾನ ತನ್ನದೆಂಬನಾಗಿ.