Pages(key to [[Help:Page Status{{!}}Page Status]])
ಲಿಂಗವಿರದೆ ಸೀಮೆಯ ಕಲ್ಲಿನಲ್ಲಿ ಲಿಂಗವಿರದೆ ಪಶುವಿನ ತೊಡೆಯಲ್ಲಿ ಕಲ್ಲ ತೆಕ್ಕೊಂಡು ಮೆಳೆಯ ಮೇಲೆ ಇಟ್ಟಡೆ ಆ ಕಲ್ಲು ಮೆಳೆಯಲ್ಲಿ ಸಿಕ್ಕಿದಡೆ ಆ ಮೆಳೆ ಭಕ್ತನಾಗಬಲ್ಲುದೆ ಇದು ಕಾರಣ ಸತ್ಯ ಸಹಜ ಸದ್ಭಾವ ಸದ್ವರ್ತನೆ ಉಳ್ಳಡೆ ಸದ್ಭಕ್ತ ಇಲ್ಲದಿದ್ದಡೆ ಆ ಮೆಳೆಯೊಳಗೆ ಸಿಕ್ಕಿ ಕಲ್ಲಿನಂತೆ ಕಾಣಾ ಕೂಡಲಸಂಗಮದೇವಾ.