ಲಿಂಗವ ಪೂಜಿಯ ಮಾಡಿ ಜಂಗಮವ ಕಂಡು ಉದಾಸೀನವ ಮಾಡಿದಡೆ ಆ ಲಿಂಗಪೂಜಕರಿಗೆ ಮಾಡಿದ ಶಿವದೂತರ ದಂಡವೆಂಬುದ. ಲೋಕದ ಕರ್ಮಿಗಳಿಗೆ ಮಾಡಿದ ಯಮದೂತರ ದಂಡವೆಂಬುದ. ಇದು ಕಾರಣ ಲಿಂಗ ಜಂಗಮವನೊಂದೆಂದರಿಯದವರ ಎನಗೆ ತೋರದಿರಯ್ಯಾ ಕೂಡಲಸಂಗಮದೇವಾ. 424