ಲಿಂಗವ ಪೂಜಿಸಿ ಫಲವೇನಯ್ಯಾ ಸಮರತಿ ಸಮಕಳೆ ಸಮಸುಖವನರಿಯದನ್ನಕ್ಕ ಲಿಂಗವ ಪೂಜಿಸಿ ಫಲವೇನಯ್ಯಾ ಕೂಡಲಸಂಗಮದೇವರ ಪೂಜಿಸಿ ನದಿಯೊಳಗೆ ನದಿ ಬೆರಸಿದಂತಾಗದನ್ನಕ್ಕ