ಲಿಂಗಸ್ಥಲವಿಲ್ಲದವರ ಭಕ್ತರೆಂಬೆ, ಗುರುಸ್ಥಲವಿಲ್ಲದವರ


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಲಿಂಗಸ್ಥಲವಿಲ್ಲದವರ ಭಕ್ತರೆಂಬೆ
ಗುರುಸ್ಥಲವಿಲ್ಲದವರ ಪ್ರಸಾದಿಗಳೆಂಬೆ (ಶಿಷ್ಯರೆಂಬೆ?)
ಪ್ರಸಾದಿಸ್ಥಲವಿಲ್ಲದವರ ಜಂಗಮವೆಂಬೆ
ಈ ತ್ರಿವಿಧಸ್ಥಲವಿಲ್ಲದವರ ಶರಣರೆಂಬೆ. ಇದು ಕಾರಣ
ಕೂಡಲಚೆನ್ನಸಂಗನಲ್ಲಿ ಭವಿಸಹಿತವಾಗಿದ್ದಾತನ ಲಿಂಗೈಕ್ಯನೆಂಬೆ.