ಲಿಂಗಾರ್ಚನೆಯಂ ಮಾಡಿ
ಅಂಗಭಾಜನ
ಲಿಂಗಭಾಜನ
ಪತ್ರಭಾಜನದಲ್ಲಿ ಸಹಭೋಜನವ ಮಾಡುವ ಸಮಯದಲ್ಲಿ ಗುರು ಲಿಂಗ ಜಂಗಮ[ಪ್ರಸಾದ]ವೆಂದೆ ಪ್ರಸಾದವ ಪಡೆವುದು. ಪ್ರಸಾದವೆಂದು ಪಡೆದ ಬಳಿಕ ಪದಾರ್ಥವೆಂದು ಭೋಗಿಸಿದಡೆ
ಪ್ರಸಾದ ದ್ರೋಹ. ಪ್ರಸಾದವೆಂದು ಅರ್ಪಿತವ ಭೋಗಿಸಿ
ಉಳಿಯದ ಹಾಂಗೆ ತೆಗೆದುಕೊಂಬುದಯ್ಯಾ. ಮೀರಿದಂದು ಅನಿಲಬ್ರಹ್ಮವಂಗಸಂಬಂಧವಾದ ಉಳುಮೆಯಲಿ ಉಳಿದ ತಾರಕಬ್ರಹ್ಮವಯ್ಯಾ. [ಅದೇನು ಕಾರಣವೆಂದಡೆ:] ಶೈವಕ್ಕೂ ವೀರಶೈವಕ್ಕೂ ಭೇದವಿಲ್ಲ ! ಆದಿಗೂ ಅನಾದಿಗೂ ನೀನೆ ! ಪದಾರ್ಥಕ್ಕೂ ಪ್ರಸಾದಕ್ಕೂ ನೀನೆ
ಭೂ ಗಗನಕ್ಕೂ ನೀನೇ ! ಕ್ರೀ ನಿಃ [ಕ್ರೀ ಗೂ ನೀನೇ]. ಪ್ರಸಾದದ ಆದಿಕುಳವ ನಾನೆತ್ತ ಬಲ್ಲೆನಯ್ಯಾ ! ದೇವ
ಕ್ರೀ ಮೀರಿದುದಾಗಿ ಸಗುಣ ನಿರ್ಗುಣವಾದ
ಸಾಕಾರ ನಿರಾಕಾರವಾದ. ಏಕ ಬ್ರ[ಹ್ಮ ಸಂ]ಗನ ಬಸವಣ್ಣ ಬಿಬ್ಬಿ ಬಾಚಯ್ಯ ಮರುಳಶಂಕರದೇವರೆಂಬ ಪರಂಜ್ಯೋತಿ ಮಹಾಲಿಂಗದಲ್ಲಿ ಏಕತೆಯಾದೆನು ಕಾಣಾ
ಕೂಡಲಚೆನ್ನಸಂಗಮದೇವಾ