ಲೋಕ ಅಳುತ್ತಿದೆ ಇದ ಬೇಕು ಬೇಡ ಎಂಬವರ ಒಬ್ಬರನು ಕಾಣೆ. ದೇಹವೆಂಬುದೊಂದು ವಿಮಾನವ ಮಾಡಿ ದೇವರೆಂಬುದೊಂದು ಹೆಣನ ಮಾಡಿ ಕುಳ್ಳಿರಿಸಿ ದೇವರು ಸತ್ತರೂ ತಮ್ಮಡಿ ಉಳಿದಡೆ ದೇಗುಲ ಹಾಳಾಯಿತ್ತ ನಾ ಕಂಡೆ. ಅಂಡಜದವರೆಲ್ಲ (ಪಿಂಡಜದವರೆಲ್ಲ ?) ಮುಂಡೆಯರಾದರು ನಿಮ್ಮ ಕಂಡವರು ಉ(ಅ?)ಳಿದರೆ ಗುಹೇಶ್ವರಾ ?