ಲೌಕಿಕದನುಸಂಧಾನ ಸಮನಿಸದೆ ಅನ್ಯವ ಸುಟ್ಟರು ಎನ್ನ ಹೃದಯದ ಕಂಗಳು ಲಿಂಗದಲ್ಲಿ ನಟ್ಟು ಬಗೆಯಲಾರಳವು. ಅಲ್ಲದೆ ನಿಷೆ* ಒಲಿದು ಗಟ್ಟಿಗೊಂಡು ಅಂಗಶಂಕೆಯೆಂಬ ಭಂಗವಿನ್ನೆಲ್ಲಿಯದೊರಿ ಹಾಲು ಬೆರಸಿದ ನೀರ ಹಂಸೆ[ಗಾ]ಗದಂತೆ ಪಾವಕನಾದನಯ್ಯಾ ಕೂಡಲಸಂಗಮದೇವಾ ನಿಮ್ಮ ಶರಣು.