ವಂದಿಸಿ ನಿಂದಿಸುವ ಸಂದೇಹಿಯ ಮನೆಯ ಕೂಳು ಹಂದಿಯ ಬಾಯ ತುತ್ತ ನಾಯಿ ಕಿತ್ತುಕೊಂಡು ತಿಂದಂತಾಯಿತ್ತು ಕಾಣ. ಅದೇನು ಒಡಲ ಉಪಾಧಿಗೆ ತನ್ನ ನಿಂದಿಸಿದುದನರಿಯದೆ ಭಕ್ತನೆಂದು ಒಳಗಿಟ್ಟುಕೊಂಡು ನಡೆವವರನೊಲ್ಲೆ ಕಾಣಾ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.