ವಾಸನೆ ಕಾರಣ ನೊಣವಿನ ಮಲ ಜೇನುತುಪ್ಪವೆಂದೆನಿಸಿತ್ತು ಪರಿಮಳ ಕಾರಣ ಕೋಣನ ಮಾಂಸ ವಾಣಿಜ್ಯತೆ ಇಂಗು ಎನಿಸಿತ್ತಯ್ಯಾ ಭಕ್ತಿ ಕಾರಣ ಎನ್ನಲುಳ್ಳ ಅವಗುಣ ಹಿಂಗಿತ್ತು ಕಾಣಾ ಕೂಡಲಸಂಗಮದೇವಾ.