ವಿರಕ್ತಿಯೇ ಅವಿರಕ್ತಿ, ವಿರಕ್ತನೆನ್ನದಿರಣ್ಣಾ.



Pages   (key to Page Status)   


ವಿರಕ್ತಿಯೇ ಅವಿರಕ್ತಿ
ವಿರಕ್ತನೆನ್ನದಿರಣ್ಣಾ. ನೋಟದ ಕರುಳ ಕೊಯ್ಯದನ್ನಕ್ಕರ
ಕ್ರೀಯದ ಕರಬೋನಗಳೊಡೆಯದನ್ನಕ್ಕರ
ಅಷ್ಟಮದಾದಿಗಳೆಂಬವ ಹೊಟ್ಟುಹುರಿಯದನ್ನಕ್ಕರ
ಬೇಕುಬೇಡಾಯೆಂದು ಪರಿವ ಸರ್ವಸಂದೇಹವ ಹೂಳದನ್ನಕ್ಕರ ವಿರಕ್ತ ವಿರಕ್ತನೆನ್ನದಿರಣ್ಣಾ. ಶ್ರೀಶೈಲಚೆನ್ನಮಲ್ಲಿಕಾರ್ಜುನದೇವನೊಬ್ಬನೆ ವಿರಕ್ತ ಕಾಣಿರಣ್ಣಾ.