ಕಬ್ಬು ಬೆಳೆವುದಯ್ಯ ಕರಿಯ


Title vachana saahitya
Author Allama Prabhu
Year 1120-1160 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಕಬ್ಬು ಬೆಳೆವುದಯ್ಯ ಕರಿಯ ಭೂಮಿಯಿದ್ದಲ್ಲಿ
ಉಬ್ಬುಬ್ಬಿ ಬೆಳೆವುದಯ್ಯ ಜಲ ಪ್ರಮಾಣವಿರ್ದಲ್ಲಿ
ದಾರಿದ್ರ್ಯವಿದ್ದಲ್ಲಿ ನಿದ್ರೆ ಬೆಳೆವುದಯ್ಯ
ನಮ್ಮ ಶಿವನ ಸಲೆ ಸಂದ ಶರಣರಾದ ಹಿರಿಯರಿದ್ದಲ್ಲಿ ಬುದ್ಧಿ ಬೆಳವುದಯ್ಯ
ಜಟ್ಟಿ ಮಾಸಾಳರಿರ್ದಲ್ಲಿ ಕಾಳಗ ಘನವನಪ್ಪುದಯ್ಯ
ಇಷ್ಟ ಕಂಡು ಬೆರಗಾದ ನಮ್ಮ ಗುಹೇಶ್ವರ.