ವೇದಕ್ಕೆ ಒರೆಯ ಕಟ್ಟುವೆ ಶಾಸ್ತ್ರಕ್ಕೆ ನಿಗಳವನಿಕ್ಕುವೆ ತರ್ಕದ ಬೆನ್ನ ಬಾರನೆತ್ತುವ ಆಗಮದ ಮೂಗ ಕೊಯಿವೆ ನೋಡಯ್ಯಾ. ಮಹಾದಾನಿ ಕೂಡಲಸಂಗಮದೇವಾ ಮಾದಾರ ಚೆನ್ನಯ್ಯನ ಮನೆಯ ಮಗ ನಾನಯ್ಯಾ.