ವೇದ ವೇಧಿಸಲರಿಯದೆ ಕೆಟ್ಟವು ಶಾಸ್ತ್ರ ಸಾಧಿಸಲರಿಯದೆ ಕೆಟ್ಟವು ಪುರಾಣ ಪೂರೈಸಲರಿಯದೆ ಕೆಟ್ಟವು. ಹಿರಿಯರು ತಮ್ಮ ತಮ್ಮ(ತಾವು ?) ಅರಿಯದೆ ಕೆಟ್ಟರು: ತಮ್ಮ ಬುದ್ಧಿ ತಮ್ಮನ್ನೇ ತಿಂದಿತ್ತು. ನಿಮ್ಮನೆತ್ತ ಬಲ್ಲರೊ ಗುಹೇಶ್ವರಾ ?