ವೇಷ ಅವಿಚಾರದಲ್ಲಿ ನಡೆುತ್ತೆಂದು ಆಸುರದಲ್ಲಿ ಬಗುಳುವ ಕುನ್ನಿ ನೀ ಕೇಳಾ : ಹರಿಯನೆ ದಾಸನ ವಸ್ತ್ರವ:ಉಣ್ಣನೆ ಚೆನ್ನಯ್ಯನ ಸಂಗಾತ ಪರವಧುವ ಕೊಳ್ಳನೆ ಸಿಂಧುಬಲ್ಲಾಳನ:ಬೇಡನೆ ಸಿರಿಯಾಳನ ಮಗನ ನಡೆವುದು ನುಡಿವುದು ಅವಿಚಾರವೆಂದು ಭಾವ ವಿಭಾವವೆಂದು ಕಂಡೆನಾದಡೆ ತಪ್ಪೆನ್ನದು ಮೂಗ ಕೊ್ಯು ಕೂಡಲಸಂಗಮದೇವಾ. 433