ಶತಕೋಟಿ ಲೋಕಂಗಳೆಲ್ಲ ಬಸವಣ್ಣನ ಕೋಡಿನಲ್ಲಿರ್ದವು ನೋಡಾ. ಅತೀತವಪ್ಪ ಪರಶಿವನು
ಬಸವಣ್ಣನ ಹಿಳಿಲ ಕೆಳಗೆ ಸೂಕ್ಷ್ಮರೂಪಾಗಿರ್ದನು ನೋಡಾ. ಸಕಲ ಶ್ರುತಿ ಸ್ಮೃತಿಗಳೆಲ್ಲ ಬಸವಣ್ಣನ ಹೊಗಳಲರಿಯದೆ ಕೆಟ್ಟವು ನೋಡಾ. ಕರ್ತನಾದನಲ್ಲದೆ ಭೃತ್ಯನಲ್ಲ
ಭಿನ್ನಾಣವ ಹೋಲಲರಿಯೆ ಒಂದೆತ್ತಿಲ್ಲದಿರ್ದಡೆ ಕತ್ತಲೆಯಾಗದೆ ಈ ಜಗವೆಲ್ಲವು ? ಹರಿವ ನದಿಗಳೆಲ್ಲ ಅಮೃತವಾದವು ಕಾಣಾ ಬಸವಣ್ಣ ನಿನ್ನಿಂದ ! ಹರಿಹನ್ನಿಕೋಟಿ ಯುಗಜುಗಂಗಳು ನಿನ್ನ ಉಸಿರಿನಲ್ಲಿ ಒತ್ತಿದಡೆ ಬ್ರಹ್ಮಾಂಡಕ್ಕೆ ಹೋದವು
ಬಿಟ್ಟಡೆ ಬಿದ್ದವು
ಕಾದಡೆ ಬದುಕಿದವು. ನೀನು ಹೊರೆವ ಯುಗಜುಗಂಗಳು ಒಂದು ತೃಣಮಾತ್ರವಾದ ಕಾರಣ ನಿನ್ನ ಹಸುಮಕ್ಕಳವರೆನುತಿರ್ದೆನಯ್ಯಾ. ನಿನ್ನ ಗೋಮಯದ ಷಡುಸಮ್ಮಾರ್ಜನೆಯ ಮೇಲೆ ಕುಳ್ಳಿರ್ದು ಗುಹೇಶ್ವರಲಿಂಗವು ಶುದ್ಧನಾದನು
ಕಾಣಾ ಸಂಗನಬಸವಣ್ಣಾ ನಿನ್ನಿಂದ !