ಶಬ್ದಿಯಾದಾತ ತರುಗಳ ಹೋತ ನಿಶ್ಶಬ್ದಿಯಾದಾತ ಪಾಷಾಣವ ಹೋತ. ಕೋಪಿಯಾದಾತ ಅಗ್ನಿಯ ಹೋತ ಶಾಂತನಾದಾತ ಜಲವ ಹೋತ. ಬಲ್ಲೆನೆಂಬಾತ ಇಲ್ಲವೆಯ ಹೋತ ಅರಿಯೆನೆಂಬಾತ ಪಶುವ ಹೋತ. ಇದು ಕಾರಣ_ಅರಿಯೆನೆನ್ನದೆ ಬಲ್ಲೆನೆನ್ನದೆ ಅರುಹಿನ ಕುರುಹನಳಿದುಳಿದು ಗುಹೇಶ್ವರನೆಂಬ ಲಿಂಗವ ಹೋತವರನಾರನೂ ಕಾಣೆ.