ಶಯನಾಸನ ಪರವಿಲ್ಲೆಂದುದು. ಜ್ಞಾನಾಜ್ಞಾನ ಭಾವ ನೋಟ ತಾನಲ್ಲ ಅರಿವಿನ ಭಾವ ಸ್ವತಂತ್ರವಿಲ್ಲ ಕಾಣಾ. ಆಕಾಯದಲ್ಲಿ ಅದ್ವೈತ ಚರಿತ್ರ; ಅರಿವಿನಲನುಗ್ರಹಿಸಿ ಸಕಾಯದಲ್ಲಿ ಸದೈವ ಚರಿತ್ರ. ಮರಹು ಉದಯಿಸದ ನಿರುಗೆಯ ಪವನ ಬ್ರಹ್ಮರಂಧ್ರರಹಿತ ! ಶಯನಾಸನವೆಂದಲ್ಲಿ ಗುಹೇಶ್ವರನೆನಲು ಹೇಸಿತ್ತು.