ಶರಣಂಗೆ ಉತ್ಪತ್ಯವಿಲ್ಲಾಗಿ ಸ್ಥಿತಿಯಿಲ್ಲ ಸ್ಥಿತಿಯಿಲ್ಲವಾಗಿ ಲಯವಿಲ್ಲ ಲಯವಿಲ್ಲವಾಗಿ ದೇಹನಾಮ ಪ್ರವರ್ತನೆಯಿಲ್ಲ ಇವಾವುದೂ ಇಲ್ಲದ ಕಾರಣ ಗುಹೇಶ್ವರಯ್ಯಾ ನಿಮ್ಮ ಶರಣ ಬಚ್ಚಬರಿಯ ಬೆಳಗು.