ಶರಣೆಂದು ಪಾದವ ಹಿಡಿದಿಹೆನೆಂದಡೆ ಚರಣದ ನಿಲವು ಕಾಣಬಾರದು ಕುರುಹುವಿಡಿದೆಹೆನೆಂದಡೆ ಕೈಗೆ ಸಿಲುಕದು ಬೆರಸಿ ಹೊಕ್ಕೆಹೆನೆಂದಡೆ ಮುನ್ನವೆ ಅಸಾಧ್ಯ. ಅಕಟಕಟಾ ಅಹಂಕಾರದಲ್ಲಿ ಕೆಟ್ಟೆನಲ್ಲಾ ಗುರುವೆ ಎನ್ನ ಪರಮಗುರುವೆ ಬಾರಯ್ಯಾ ಅರಿಯದ ತರಳನ ಅವಗುಣವ ನೋಡುವರೆ ಕೂಡಲಸಂಗಮದೇವಾ