ಶಾಂತಿಯ ಮಾಡಹೋದಡೆ ಬೇತಾಳವಾಯಿತ್ತಯ್ಯಾ. ಸೀತಾಳದಾಪ್ಯಾಯನವಾಯಿತೆಂದಡೆ ಪರಹಿತಾರ್ಥವೆಂದು ತೋರಿದೆನೆನ್ನ ಪ್ರಾಣಲಿಂಗವನು ನೇಮವ ಮಾಡಲೆಂದು ಕೊಟ್ಟಡೆ ಕೊಂಡೋಡಿ ಹೋದನು ಅನಿಮಿಷನು. ಅಭವನ ಮಹಾಮನೆಯ ಹೊಕ್ಕಡೆ ಎನಗೆ ಹೇಯವನೊಡ್ಡಿ ಅರಸೆಂದು ಕಳುಹಿದನು. ಅಳಲಿ ಬಳಲಿ ತೊಳಲಿ ಆಡಿಹಾಡಿ ಹಂಬಲಿಸಿ
ಅನಂತ ಅವಸ್ಥೆಯಿಂದ ಲಕ್ಷದ ಮೇಲೆ ತೊಂಬತ್ತಾರುಸಾವಿರ ವಚನವ ಹಾಡಿ ಆಚಾರ ವಿಚಾರದಿಂದ ವಿಚಿತ್ರನಭೆಯವ ಕೊಟ್ಟು ಕಳುಹಿಸಿದನಯ್ಯಾ. ಗೊಹೇಶ್ವರನ ಶರಣ ತೋರಿದಡರಿದನು ಕೂಡಲಸಂಗಮದೇವರ.