ಶಿಲೆ ಸ್ಥಾವರ ಮುಂತಾದುವಕ್ಕೆ ಅಪ್ಪುವೆ ಬೀಜ. ಸಕಲ ಚೇತನಾದಿ ರೂಪುಗೊಂಡುವಕ್ಕೆ ವಸ್ತುವೆ ಬೀಜ. ಆ ವಸ್ತು ಜಗದ ಹಿತಾರ್ಥ ಪೀಠಸಂಬಂಧಿಯಾಗಿ `ಏಕಮೂರ್ತಿಸ್ತ್ರಯೋ ಭಾಗಾಃ' ಆಗಲಾಗಿ ವರ್ತುಳ ಗುರುವಾಗಿ
ಗೋಮುಖ ಜಂಗಮವಾಗಿ ಗೋಳಕಾಕಾರಮೂರ್ತಿ ಲಿಂಗವಾದ ಕಾರಣ
ಲಿಂಗವಾಯಿತ್ತು. ಇಂತೀ ತ್ರಿವಿಧದೊಳಗೆ ಒಂದ ಮೀರಿ ಒಂದ ಕಂಡೆಹೆನೆಂದಡೆ ಬೀಜವಿಲ್ಲದ ಅಂಕುರ
ಅಂಕುರವಿಲ್ಲದ ಬೀಜ. ಅಂಕುರ ಬೀಜವಿರೆ
ಅಪ್ಪು ಪೃಥ್ವಿ ಸಾಕಾರವಿಲ್ಲದಿರೆ ಅಂಕುರಕ್ಕೆ ದೃಷ್ಟವಿಲ್ಲ. ಕೂಡಲಚೆನ್ನಸಂಗಮದೇವರಿರುತಿರಲಿಕ್ಕೆ ಗುರು-ಲಿಂಗ-ಜಂಗಮವೆಂಬ ಭಾವ ಒಡಲಾಯಿತ್ತು.