ಶೂಲದ ಮೇಲಣ ತಲೆಯ ವೈಭೋಗವನಾರು ಬಯಸಿದಡೆಲ್ಲಿಯದು ? ಉಂಬಡೆ ಒಡಲಿಲ್ಲ ಲಿಂಗಾರ್ಚನೆಯಿಲ್ಲ ಅಂಗಭೋಗಕ್ಕೆ ಕರಚರಣಂಗಳಿಲ್ಲ. ಅಂಗವಿಲ್ಲೆಂಬ ಮಾತು ನಿಮಗೇಕೆ ? ಸುಡು ಭಂಗ. ಲಿಂಗ ನಿರಾಳ ಗುಹೇಶ್ವರಾ !