ಶ್ವಾನ ಮಡಕೆಯನಿಳುಹಿ ಬೋನವನುಂಡು ಮಡಕೆಯನೇರಿಸಲರಿಯದಂತೆ ನಾನು ಷಟ್ಸ್ಥಲವನೋದಿ ಏನ ಮಾಡುವೆನಯ್ಯಾ ಅವಗುಣಂಗಳೆನ್ನ ಬೆನ್ನ ಬಿಡದನ್ನಕ್ಕರ ಕಾರ್ಯವುಳ್ಳ ಕರ್ತ ಜಂಗಮಲಿಂಗದಲ್ಲಿ ನಾನು ದಾಸೋಹವ ಮಾಡಲರಿಯದೆ ಕೆಟ್ಟೆನು ಕೂಡಲಸಂಗಮದೇವಾ.