ಸಂಗಸಹಿತ ಶರಣರು ಬಂದರೆ ನಂಬುವುದೆನ್ನ ಮನವು ನಚ್ಚುವುದೆನ್ನ ಮನವು. ಹಾವು ನೇಣೆಂಬ ಭ್ರಾಂತುಳ್ಳನ್ನಕ್ಕ ನಾನು ಭಕ್ತನೆಂತಪ್ಪೆನು ಅಂಗಲಿಂಗ ಸನ್ನಿಹಿತವಾಗಿ ಬಂದಡೆ ಸಂಗ ನೀನೆಂದು ಮತ್ತೆ ಮನದಲ್ಲಿ ಸಂದೇಹ ಹೊಳೆದಡೆ ಬೆಂದೆನಲ್ಲಾ ನಾನು ಕೂಡಲಸಂಗಮದೇವಾ. 404