ಸಂಸಾರಸರ್ಪನ ಹೇಳಿಗೆಯ ಬಿಡಿಸಲು ಬಾರದು ಬಿಟ್ಟಡೆ ಕಟ್ಟಲು ಬಾರದು ನೋಡಾ. ಬಿಡಿಸುವ ಬೆಡಗಿನ್ನೆಂತೊ ! ಕಾಮಕ್ರೋಧಲೋಭಮೋಹಮದಮತ್ಸರವೆಂಬ ವಿಷದ ಹಲ್ಲಿಂಗಾವುದು ಗಾರುಡವಯ್ಯಾ ಮಹಾದಾನಿ ಕೂಡಲಸಂಗಮದೇವಾ