Pages(key to [[Help:Page Status{{!}}Page Status]])
ಸಕಳಸ್ಥಲದ ಲಿಂಗ ಮನಸ್ಥಲದಲ್ಲಿ ವೇದ್ಯವಾಗಿ ಮನಸ್ಥಲದ ಲಿಂಗ ಮಹಾಸ್ಥಲದಲ್ಲಿ ವೇದ್ಯವಾಗಿ ಆ ಮಹಾಸ್ಥಲವೇ ಎನ್ನ ಸರ್ವಾಂಗದಲ್ಲಿ ವೇದ್ಯವಾದ ಬಳಿಕ ಇನ್ನು ಭಿನ್ನಭಾವಕ್ಕೆ ತೆರಹೆಂಬುದುಂಟೆ ? ಗುಹೇಶ್ವರನೆಂಬ ಪ್ರಾಣಲಿಂಗವ ಬೆರಸಿ ಸಮರಸವಾದ ಬಳಿಕ ಎರಡೆಂಬುದಿಲ್ಲ ನೋಡಾ ಚೆನ್ನಬಸವಣ್ಣ.