ಸಗುಣಾನಂದಜೀವಚರ್ಯವಿಡಿದೆತ್ತಿ ಜೀವಾತ್ಮನ ಹೇಯವೆಂದು


Title vachana saahitya
Author ChennaBasavanna
Year 1144-1168 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಸಗುಣಾನಂದಜೀವಚರ್ಯವಿಡಿದೆತ್ತಿ ಜೀವಾತ್ಮನ ಹೇಯವೆಂದು ಆತ್ಮನ ನಿಜವನರಿದು
ನಿರ್ಗುಣಾನಂದಲೀಲೆಯ ವಿರತಿಯೊಡನೆ ಪರಮಾತ್ಮ ತಾನೆಂದರಿದ ಶರಣಂಗೆ
ಎಂತಿರ್ದುದಂತೆ ಪೂಜೆ ನೋಡಾ. ಆ ಶರಣ ಭೋಗಿಸಿತೆಲ್ಲವು ಲಿಂಗಾರ್ಪಿತ
ರುಚಿಸಿತೆಲ್ಲವು ಪ್ರಸಾದ. ಆ ಶರಣನರಿದುದೆಲ್ಲವು ಪರಬ್ರಹ್ಮ
ನುಡಿದುದೆಲ್ಲವು ಶಿವತತ್ವ ಆ ಶರಣ ತಾನೆ ಕೂಡಲಚೆನ್ನಸಂಗಯ್ಯ.