ಸತ್ತು ಮುಂದೆ ದೇವರ ಕೂಡಿಹೆವೆಂಬಿರಿ ಸಾಯದ ಮುನ್ನ ಸತ್ತಿಪ್ಪಿರಿ. ಎಂತಯ್ಯಾ ನಿಮ್ಮ ಲಿಂಗೈಕ್ಯದ ಪರಿ ? ಎಂತಯ್ಯಾ ನಿಮ್ಮ ಪ್ರಮಥರ ಪರಿ ? ಅಂಗದ ಅವಸ್ಥೆಯಲ್ಲದೆ ಲಿಂಗದ ಅವಸ್ಥೆ ಆರಿಗೂ ಇಲ್ಲ ಗುಹೇಶ್ವರಾ.