ಸತ್ತು ಹುಟ್ಟುವನಲ್ಲ ಸಂದೇಹ ಸೂತಕಿಯಲ್ಲ ಆಕಾರ ನಿರಾಕಾರ ನೋಡಯ್ಯಾ ! ಕಾಯವಂಚಕನಲ್ಲ ಜೀವವಂಚಕನಲ್ಲ ನಿರಂತರ ಸಹಜ ನೋಡಯ್ಯಾ ! ಶಂಕೆಯಿಲ್ಲದ ಮಹಿಮನು ನೋಡಯ್ಯಾ ಕೂಡಲಸಂಗನ ಶರಣನುಪಮಾತೀತ ನೋಡಯ್ಯಾ.