ಸಮುದ್ರಕ್ಕೆ ಚಂದ್ರಮನ ಬರವೆ


Pages   (key to Page Status)   

ಸಮುದ್ರಕ್ಕೆ ಚಂದ್ರಮನ ಬರವೆ ಜೀವಾಳವಯ್ಯಾ
ಬತ್ತಿದ ಕೆರೆಯ ಕಮಲಕ್ಕೆ ಉದಕವೆ ಜೀವಾಳವಯ್ಯಾ
ಚಕೋರಂಗೆ ಚಂದ್ರಮನ ಬರವೆ ಜೀವಾಳವಯ್ಯಾ. ಕೂಡಲಸಂಗಮದೇವಾ
ಎನಗೆ ನಿಮ್ಮ ಶರಣರ ಬರವೆ ಜೀವಾಳವಯ್ಯಾ.