ಸರ್ಪ ಸಂಸಾರಿಯೊಡನಾಡಿ ಕಟ್ಟುವಡೆಯಿತ್ತು ಮನವ ತಮಂಧ ಬಿಡದು ಮನದ ಕಪಟ ಬಿಡದು. ಸಟೆಯೊಡನೆ ದಿಟವಾಡೆ ಬಯಲು ಬಡಿವಡೆಯಿತ್ತು ! ಕಾಯದ ಸಂಗದ ಜೀವವುಳ್ಳನ್ನಕ್ಕರ ಎಂದೂ ಭವ ಹಿಂಗದು ಗುಹೇಶ್ವರಾ.