ಸರ್ವಾಚಾರಸಂಪತ್ತನರಿದಲ್ಲದೆ ಎಂತೆನಲು, ನಿರವಯಲಪದವ


Title vachana saahitya
Author ಷಣ್ಮುಖಸ್ವಾಮಿ
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಸರ್ವಾಚಾರಸಂಪತ್ತನರಿದಲ್ಲದೆ ನಿರವಯಲಪದವ ಕಾಣಬಾರದು ನೋಡಾ ಆರಿಗೆಯು. ಸರ್ವಾಚಾರಸಂಪತ್ತು ಎಂತೆನಲು
ಷಡ್‍ಭೂತಂಗಳಲ್ಲಿ ಷಡ್ವಿಧ ಮಂತ್ರಂಗಳ ನೆಲೆಗೊಳಿಸಿ
ಆ ಷಡ್ವಿಧ ಮಂತ್ರಂಗಳನೆ ಷಡ್ವಿಧಚಕ್ರಂಗಳೆಂದು ತಿಳಿದು
ಆ ಷಡ್ವಿಧ ಚಕ್ರಂಗಳಿಗೆ ಷಡ್ವಿಧ ಅದ್ಥಿದೈವಂಗಳನೆ ಷಡ್ವಿಧ ಅಂಗವೆಂದಾಧಾರಗೊಳಿಸಿ
ಆ ಷಡ್ವಿಧ ಅಂಗಕ್ಕೆ ಷಡ್ವಿಧ ಕರಣಂಗಳನೆ ಷಡ್ವಿಧ ಹಸ್ತಂಗಳೆಂದು ಅರಿದಳವಡಿಸಿಕೊಂಡು
ಆ ಷಡ್ವಿಧ ಹಸ್ತಂಗಳಿಗೆ ಷಡ್ವಿಧ ಲಿಂಗಂಗಳನಳವಡಿಸಿಕೊಂಡು
ಆ ಷಡ್ವಿಧ ಲಿಂಗಕ್ಕೆ ಷಡ್ವಿಧೇಂದ್ರಿಯಂಗಳನೆ ಷಡ್ವಿಧ ಪದಾರ್ಥಂಗಳೆಂದರಿದು
ಆ ಷಡ್ವಿಧ ಪದಾರ್ಥಂಗಳನು ಷಡ್ವಿಧ ಭಕ್ತಿಯಿಂದೆ ಷಡ್ವಿಧ ಲಿಂಗಮುಖಂಗಳಿಗೆ ಸಮರ್ಪಿಸಲು
ಒಳಹೊರಗೆಲ್ಲ ಆ ಷಡ್ವಿಧ ಲಿಂಗದ ಬೆಳಗು ತುಂಬಿ ತೊಳಗಿ ಬೆಳಗುತಿರ್ಪುದು ನೋಡಾ. ಎಡೆದೆರಹಿಲ್ಲದೆ ಆ ಷಡ್ವಿಧ ಲಿಂಗದ ಬೆಳಗಿನೊಳಗೆ ತನ್ನ ಷಡ್ವಿಧಾಂಗದ ಕಳೆಗಳನೆಲ್ಲವನಡಗಿಸಿ
ತಾನೆಂಬ ಕುರುಹುದೋರದಿರ್ದಡೆ ಅದೇ ಸರ್ವಾಚಾರಸಂಪತ್ತು ನೋಡಾ. ಇಂತಪ್ಪ ಸರ್ವಾಚಾರಸಂಪತ್ತು ನಿಮ್ಮ ಪೂರ್ಣ ಒಲುಮೆಯ ಶರಣರಿಗಲ್ಲದೆ ಉಳಿದವರಿಗಳವಡದಯ್ಯಾ ಅಖಂಡೇಶ್ವರಾ ?