ಸಾಕಾರ ನಿರಾಕಾರದೊಳಗೆ ನಿರವಯಾಂಗನಾಗಿ ಸುಳಿದು ಭಕ್ತರ ಭವವ ಹರಿಯಲೆಂದು ಬಂದ ಜಂಗಮದ ಪರಿಯ ನೋಡಾ. ಉಳಲುಡಲು ಬಂದವನಲ್ಲ ಪ್ರಭುದೇವರು ತ್ರಿವಿಧದಾಸೆ ಮುನ್ನವೆಯಿಲ್ಲ ಪ್ರಭುದೇವರಿಗೆ. ಭಕ್ತನೆಂಬ ತನ್ನಂಗವ ತನ್ನೊಳೈಕ್ಯವ ಮಾಡಿಕೊಂಡು ನಿರವಯವಾಗ ಬಂದ ನಿರವಯನಯ್ಯಾ ಕೂಡಲಸಂಗಮದೇವರಲ್ಲಿ ಪ್ರಭುದೇವರು.