ಸಾಸಿರದೆಂಟನೆಯ ದಳದಲ್ಲಿ ಖೇಚರಿ ಚಲ್ಲಣಗಟ್ಟಿ ವಾಸುಗಿಯ ಫಣಾಮಣಿ ಪ್ರಜ್ವಲಿಸುವುದ ಕಂಡೆ. ಅಸುರರೆಲ್ಲ ತಮತಮಗಂಜಿ ಓಸರಿಸಿ ಮುಂದೆ ನಡೆವಲ್ಲಿ ನಾಸಿಕ ಮನವ ಮುಸುಕುವುದ ಕಂಡೆ ತಾ ಸುಖಸ್ವರೂಪನಾದ; ಸುಖ ಮುಖಪ್ರವೇಶದಿಂದ! ಗೋಸಾಸಿರ ನಡೆಗೆಟ್ಟವು ಗುಹೇಶ್ವರಾ ನಿಮ್ಮುವ ನೆರೆದೆನಾಗಿ.