ಸುಖವನರಿಯದ ಹೆಣ್ಣು ಸೂಳೆಯಾದಳು ಲಿಂಗವನರಿಯದ ಭಕ್ತ ಶೀಲವಂತ ಪ್ರಪಂಚಿಯಾದ. ಈ ಸೂಳೆಗೆ ಸುಖವುಂಟೆ ? ಈ ಶೀಲಕ್ಕೆ ಗತಿಯುಂಟೆ ? ಈ ಉಭಯರುಗಳು ಕೆಟ್ಟ ಕೇಡ ನೋಡಾ ಗುಹೇಶ್ವರಾ.