ಸೃಷ್ಟಿಗೆ ಹುಟ್ಟಿದ ಕಲ್ಲು ಕಲ್ಲುಕುಟಿಕನಿಂದ ಮೂರ್ತಿಯಾಗಿ ಮಂತ್ರಕ್ಕೆ ಲಿಂಗವಾಯಿತಲ್ಲಾ ಇವರಿಗೆ ಹುಟ್ಟಿದ ಕೂಸ ಲಿಂಗವೆಂದು ಕೈವಿಡಿವ ವ್ರತಗೇಡಿಗಳನೇನೆಂಬೆ ಗುಹೇಶ್ವರಾ