ಸ್ಥೂಲತನು ಸೂಕ್ಷ್ಮತನು ಕಾರಣತನು: ಸ್ಥೂಲತನುವಿನಲ್ಲಿ ಇಷ್ಟಲಿಂಗಪ್ರತಿಷ್ಠೆ
ಸೂಕ್ಷ್ಮತನುವಿನಲ್ಲಿ ಪ್ರಾಣಲಿಂಗಪ್ರತಿಷ್ಠೆ
ಕಾರಣತನುವಿನಲ್ಲಿ ತೃಪ್ತಿಲಿಂಗಪ್ರತಿಷ್ಠೆ. ಇಂತೀ ಸ್ಥೂಲ ಸೂಕ್ಷ್ಮ ಕಾರಣವು ಮಹವು ! ಮಹದುದಯ ಹೃದಯದಲ್ಲಿ ಕೊನೆದೋರುತ್ತಿಪ್ಪ ಪರಂಜ್ಯೋತಿ
ನಿಮ್ಮ ಶರಣನ ಸರ್ವಾಂಗದಲುಂಟು ಕೂಡಲಚೆನ್ನಸಂಗಮದೇವಾ.