ಸ್ವಯಾಧೀನಮುಕ್ತನೆಂಬವನೊಬ್ಬ; ಪರಾಧೀನ ಮುಕ್ತನೆಂಬುವನೊಬ್ಬ.


Title vachana saahitya
Author Tomtada Siddalingeshwara ShivaYogigaLu
Year 1550-1600 AD
Publisher anubhava mantapa
Source vachana saahitya
Progress Unknown progress (template error)
Transclusion Index not transcluded or unreviewed
Pages (key to [[Help:Page Status{{!}}Page Status]])


ಸ್ವಯಾಧೀನಮುಕ್ತನೆಂಬವನೊಬ್ಬ; ಪರಾಧೀನ ಮುಕ್ತನೆಂಬುವನೊಬ್ಬ. ಕರ್ತೃಹೀನವಾಗಿ ಆತ್ಮನು ತನ್ನಿಂದ ತಾನೆ ಮುಕ್ತನೆಂಬುದು ಅದು ಅಜ್ಞಾನ ನೋಡ. ಆತ್ಮನು ಪಶುಪಾಶಬದ್ಧನು
ಅನಾದಿ ಮಲಯುಕ್ತನಾಗಿ
ಪಶುವಾಗಿ
ಆತ್ಮನೊಬ್ಬನುಂಟೆಂಬೆ. ಅನಾದಿಯಾಗಿ ಪಶುಪತಿಯಾಗಿ ನಿರ್ಮಲನಪ್ಪ ಶಿವನೊಬ್ಬನು ಬೇರುಂಟೆಂದೆ. ಮಲ ಮಾಯಾ ಕರ್ಮವನುಂಡು ತೀರಿಸಿ ಶಿವನ ಪ್ರಸಾದದಿಂದ ಮುಕ್ತನೆಂಬೆ. ಆ ಮುಕ್ತಿಯಲ್ಲಿಯು ಪರಾಧೀನಮುಕ್ತನಲ್ಲದೆ ಏಕತ್ವವಿಲ್ಲ ಎಂಬೆ. ಏಕತ್ವವಿಲ್ಲದಾಗಳೆ ಮುಕ್ತಿಯೆಂಬುದು ಹುಸಿ. ಮಸಿಯೆಂದಾದರೂ ಬೆಳ್ಪಾದುದುಂಟೆ? ಅಂಬರ ಮಾಸಿದರೆ ತೊಳದಡೆ ಬೆಳ್ಳಹುದಲ್ಲದೆ
ಮಲದಲ್ಲಿ ಸೀರೆಯ ಮಾಡಿ ತೊಳೆದರೆ ಬಿಳಿದಾಗಬಲ್ಲುದೆ? ಇದು ಕಾರಣ
ದ್ವೆ ೈತಕ್ಕೆ ಎಂದೂ ಮುಕ್ತಿಯಿಲ್ಲಯೆಂದೆ. ಇತರ ಮತಂಗಳಂತಿರಲಿ. ಪರಶಿವನ ಪರಶಕ್ತಿಯಿಂದ ಸುಜ್ಞಾನಶಕ್ತಿ ಉದಯವಾದಳು. ಆ ಸುಜ್ಞಾನಶಕ್ತಿಯು ಗರ್ಭದಲ್ಲಿ ಶಿವಶರಣನುದಯವಾದ. ಅಂತುದಯವಾದ ಶರಣನು ಆ ಸುಜ್ಞಾನಶಕ್ತಿಯ ಸಂಗವ ಮಾಡಿ
ಆ ಸುಜ್ಞಾನಶಕ್ತಿಯೊಳಗೆ ತಾನೆಂಬ ಭಾವವ ಮರೆದು
ತಾನೆ ಪರಶಿವತತ್ವದೊಳಗೆ ದೀಪ ದೀಪವ ಬೆರಸಿದಂತೆ ರೂಪೆರಡಳಿದು ಏಕಾರ್ಥವಾಗಿ ನಿತ್ಯ ಮುಕ್ತನಾದ ನಿಜಲಿಂಗೈಕ್ಯನು ದ್ವೆ ೈತಿಯಲ್ಲ; ಅದ್ವೆ ೈತಿಯಲ್ಲ ಕಾಣಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.