ಸ್ವಸ್ಥಾನ ಸ್ವ(ಸು?)ಸ್ಥಿರದ ಸುಮನಮಂಟಪದೊಳಗೆ ನಿತ್ಯನಿರಂಜನ ಪ್ರಭೆಯೊಳಗೆ ಶಿವಯೋಗದನುಭಾವವೇಕಾರ್ಥವಾಗಿ ಗುಹೇಶ್ವರಾ ನಿಮ್ಮ ಶರಣನನುಪಮಸುಖಿಯಾಗಿರ್ದನು.