Pages   (key to Page Status)   


ಹಗಲ ಇರುಳ ಮಾಡಿ
ಇರುಳ ಹಗಲ ಮಾಡಿ
ಆಚಾರವ ಅನಾಚಾರವ ಮಾಡಿ
ಅನಾಚಾರವ ಆಚಾರವ ಮಾಡಿ
ಭಕ್ತನ ಭವಿಯ ಮಾಡಿ
ಭವಿಯ ಭಕ್ತನ ಮಾಡಿ ನುಡಿವವರ ಮಾತ ಕೇಳಲಾಗದು ಗುಹೇಶ್ವರಾ.