ಹಗಹದಲ್ಲಿ ಬಿದ್ದವರ ಮೇಲೆ


Pages   (key to Page Status)   

ಹಗಹದಲ್ಲಿ ಬಿದ್ದವರ ಮೇಲೆ ಒರಳ ನೂಕುವರೆ ಕೋಳದ ಮೇಲೆ ಸಂಕೋಲೆಯನಿಕ್ಕುವರೆ ಬೆಂದ ಹುಣ್ಣ ಕಂಬಿಯಲ್ಲಿ ಕೀಸುವರೆ ಕೂಡಲಸಂಗಯ್ಯ ಕಾಡುವ ಕಾಟ ಸಿರಿಯಾಳಂಗಲ್ಲದೆ ಸೈರಿಸಬಹುದೆ