ಹರಿಯ ಬೇಡುವಡೆ ಅವಗೆ ಬಲೀಂದ್ರ ದಾನವನಿಕ್ಕಿದನು
ಬ್ರಹ್ಮನ ಬೇಡುವಡೆ ಅವಗೆ ಶಿರವಿಲ್ಲ
ಚೌದ್ಧನ ಬೇಡುವಡೆ ಅವಗೆ ಬುದ್ಧಿ ಸಮನಿಸದು
ಜಿನನ ಬೇಡುವಡೆ ಅವಗೆ ಉಡಲಿಲ್ಲ
ಬೆನಕನ ಬೇಡುವಡೆ ಅವಗೆ ಕೋಡು ಮುರಿಯಿತ್ತು
ಭೈರವನ ಬೇಡುವಡೆ ಅವ ಉಟ್ಟುದನಿಕ್ಕಿ ಆಡುತ್ತಿರ್ದನು. ಅಭಯಂಕರ ಜಗಕ್ಕೆಲ್ಲ ! ಜಗದಾನಿಯ ಬೇಡುವೆನು ಕೂಡಲಸಂಗಯ್ಯನ.