ಹಳೆಗಾಲದಲಿ ಒಬ್ಬ ಪುರುಷಂಗೆ
ಎಳೆಯ ಕನ್ನಿಕೆಯ ಮುದುವೆಯ ಮಾಡಲು
ಕೆಳದಿಯರೈವರು ನಿಬ್ಬಣ ಬಂದರು. ಹಸೆಯ ಮೇಲೆ ಮದವಣಿಗನ ತಂದು ನಿಲಿಸಲೊಡನೆ
ಶಶಿವದನೆ ಬಂದು ಕೈಯ ಪಿಡಿದಳು. ಮೇಲುದಾಯದಲೊಬ್ಬ ಸತಿ ಕಣ್ಣು ಸನ್ನೆಯ ಮಾಡುತ್ತಿರೆ
ಕೂಡೆ ಬಂದ ನಿಬ್ಬಣಗಿತ್ತಿಯರೆಲ್ಲ ಹೆಂಡತಿಯರಾದರು ! ದೂರವಿಲ್ಲದ ಗಮನಕ್ಕೆ ದಾರಿಯ ಪಯಣ ಹಲವಾಯಿತ್ತು. ಸಾರಾಯ ನಿರ್ಣಯವನೇನೆಂಬೆ ಗುಹೇಶ್ವರಾ.