ಹಳ್ಳದೊಳಗೊಂದು ಹುಳ್ಳಿ ಬರುತ್ತಿರಲು ನೊರೆ ತೆರೆಗಳು ತಾಗಿದುವಲ್ಲಾ ! ಸಂಸಾರವೆಂಬ ಸಾಗರದೊಳಗೆ ಸುಖದುಃಖಗಳು ತಾಗಿದವಲ್ಲಾ ! ಇದಕ್ಕಿದು ಮೂರ್ತಿಯಾದ ಕಾರಣ ಪ್ರಳಯವಾಯಿತ್ತು ಗುಹೇಶ್ವರಾ.