ಹಸಿವರತಲ್ಲದೆ ಪ್ರಸಾದಿಯಲ್ಲ. ತೃಷೆಯರತಲ್ಲದೆ ಪಾದೋದಕಿಯಲ್ಲ. ನಿದ್ರೆಯರತಲ್ಲದೆ ಭವವಿರಹಿತನಲ್ಲ. ಅನಲ_ಪವನವರತಲ್ಲದೆ ಪ್ರಾಣಲಿಂಗಿಯಲ್ಲ._ ಇದು ಕಾರಣ ಗುಹೇಶ್ವರಲಿಂಗವು ಎಲ್ಲರಿಗೆಲ್ಲಿಯದೊ?