ಹಸಿವಾಯಿತ್ತೆಂದು ಅರ್ಪಿತವ ಮಾಡುವರಯ್ಯಾ ತೃಷೆಯಾಯಿತ್ತೆಂದು ಮಜ್ಜನಕ್ಕೆರೆವರಯ್ಯಾ ಹಸಿವು ತೃಷೆ ವಿಷಯಕ್ಕೆ ಬಳಲುವರಯ್ಯಾ. ಹಸಿವಾಯಿತ್ತೆಂದು ಅರ್ಪಿತವ ಮಾಡಲಿಲ್ಲ ತೃಷೆಯಾಯಿತ್ತೆಂದು ಮಜ್ಜನಕ್ಕೆರೆಯಲಿಲ್ಲ ಇದು ಕಾರಣ ಕೂಡಲಸಂಗಮದೇವ ಪೂಜಿಸಿ ಪ್ರಸಾದವ ಹಡೆವರೊಬ್ಬರೂ ಇಲ್ಲ.